ಖಾಸಗಿ ಹೋಟೆಲ್​ನಲ್ಲಿ ಅಗ್ನಿ ಅವಘಡ

ಬೆಂಗಳೂರು: ಜಯನಗರದ ನಾಲ್ಕನೇ ‌ಬ್ಲಾಕ್​ನಲ್ಲಿನ ನ್ಯೂ ಶಾಂತಿಸಾಗರ್ ಹೋಟೆಲ್​ನಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಹೊತ್ತಿಕೊಡ ಹಿನ್ನೆಲೆಯಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ದಟ್ಟ ಹೊಗೆ ವ್ಯಾಪಿಸಿದೆ. ಘಟನೆಗೆ ಕಾರಣ ಏನೆಂದು ಇದುವರೆಗೂ ತಿಳಿದುಬಂದಿಲ್ಲ. ಅದೃಷ್ಟವಶಾತ್​ ಯಾವುದೇ ಅನಾಹುತ ಸಂಭವಿಸಿಲ್ಲ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv