ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗೆ ಕಿಡಿಗೇಡಿಗಳಿಂದ ಬೆಂಕಿ

ರಾಯಚೂರು: ತಡರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಘಟನೆ ಲಿಂಗಸುಗೂರು ತಾಲೂಕಿನ ಹಟ್ಟಿ ಗ್ರಾಮದಲ್ಲಿ ನಡೆದಿದೆ. ಬೆಂಕಿಗೆ ಆಹುತಿಯಾದ ಹೀರೊ ಹೋಂಡಾ ಬೈಕ್​ ಗ್ರಾಮದ ಎಸ್​​ಬಿಐ ಬ್ಯಾಂಕ್ ಸಿಬ್ಬಂದಿ ಅಯ್ಯಪ್ಪ ಎನ್ನುವವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಇನ್ನೂ ಘಟನೆಯಲ್ಲಿ ಬೈಕ್​ ಸುಟ್ಟು ಕರಕಲಾಗಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನಿಮ್ಮ ಸಲಹೆ ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂರ್ಪಕಿಸಿ:contact@firstnews.tv