ಪರಿಷತ್​ ಕಾಂಗ್ರೆಸ್​ ಅಭ್ಯರ್ಥಿ ಎಂ. ರಾಮಪ್ಪ ಪರ: ಮುಖ್ಯಮಂತ್ರಿ ಚಂದ್ರು ಪ್ರಚಾರ

ದಾವಣಗೆರೆ: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಚಂದ್ರು ಅವರು ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ದಾವಣಗೆರೆ ಜಿಲ್ಲೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ.
ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಎಂ. ರಾಮಪ್ಪ ಅವರ ಪರವಾಗಿ ಮುಖ್ಯಮಂತ್ರಿ ಚಂದ್ರು ಪ್ರಚಾರ ನಡೆಸುತ್ತಿದ್ದಾರೆ. ವಿಧಾನಸಭೆಯಲ್ಲಿ ಸಮ್ಮಿಶ್ರ ಸರ್ಕಾರ ಇರುವುದರಿಂದ ಉತ್ತಮ‌ ಆಡಳಿತಕ್ಕೆ ಮೇಲ್ಮನೆಯಾದ ವಿಧಾನ ಪರಿಷತ್​ನಲ್ಲೂ ಕಾಂಗ್ರೆಸ್ ಬೆಂಬಲಿಸಿ ಅಂತ ಮನವಿ ಮಾಡಿದರು.
ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಆಗ್ನೇಯ ಶಿಕ್ಷಕರ ಕ್ಷೇತ್ರದ ಜಿಲ್ಲೆಗಳಾಗಿವೆ. 5 ಜಿಲ್ಲೆಯ, 32 ತಾಲೂಕಿನಲ್ಲಿ 2500 ಕ್ಕೂ ಹೆಚ್ಚು ಮತಗಳಿವೆ. ಚಿಂತಕರ ಚಾವಡಿ ಎಂದೇ ಕರೆಯಲಾಗುವ ಶಿಕ್ಷಕರ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಗೆ ಪ್ರಮುಖವಾಗಿ ಶಿಕ್ಷಕರೇ ಮತಚಲಾವಣೆ ಮಾಡಿ ಆಯ್ಕೆ ಮಾಡುತ್ತಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv