ಸಚಿವನಾಗಿ ಮೊದಲು ಸರ್ಕಾರದ ಪರ ಬ್ಯಾಟಿಂಗ್ ಮಾಡ್ತೀನಿ: ಪ್ರಿಯಾಂಕ್ ಖರ್ಗೆ

ಕಲಬುರ್ಗಿ: ಸಚಿವನಾಗಿ ಮೊದಲು ಸರ್ಕಾರದ ಪರ ಬ್ಯಾಟಿಂಗ್ ಮಾಡ್ತೀನಿ. ನಂತ್ರ ಪಕ್ಷದ ಪರವಾಗಿ ಬ್ಯಾಟಿಂಗ್ ಮಾಡ್ತೀನಿ ಅಂತಾ ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸಚಿವರಾದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರ ಚಿತ್ತಾಪುರಕ್ಕೆ ಆಗಮಿಸಿದ ಪ್ರಿಯಾಂಕ್ ಖರ್ಗೆ, ಅವರನ್ನು ತೆರೆದ ವಾಹನದಲ್ಲಿ ಅದ್ಧೂರಿ ಮೆರವಣಿಗೆ ಮಾಡಿದ ಕಾರ್ಯಕರ್ತರು ಪಟಾಕಿ ಹಚ್ಚಿ ಸಂಭ್ರಮಿಸಿದ್ರು.
ಈ ವೇಳೆ, ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಹಾಲಿ, ಮಾಜಿ ಸಿಎಂ ಸಿದ್ದರಾಮಯ್ಯನವರ ಸಂಘರ್ಷ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರದ ಆಯಸ್ಸು ಒಂದೇ ವರ್ಷ ಅಂತ ಸಿದ್ದರಾಮಯ್ಯನವರು ಹೇಳಿಲ್ಲ. ನಾವು 5 ವರ್ಷ ಅಂತಾನೇ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದು. ಸರ್ಕಾರದ ಅವಧಿ ಬಗ್ಗೆ ಯಾವುದೇ ಗೊಂದಲವಿಲ್ಲ ಅಂತಾ ಹೇಳಿದ್ರು. ಸಚಿವನಾಗಿ ಮೊದಲು ಸರ್ಕಾರದ ಪರ ಬ್ಯಾಟಿಂಗ್ ಮಾಡ್ತೀನಿ. ನಂತ್ರ ಪಕ್ಷದ ಪರವಾಗಿ ಬ್ಯಾಟಿಂಗ್ ಮಾಡ್ತೀನಿ ಅಂತಾ ಹೇಳಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv