ದಿ ವಿಲನ್ ಟಿಕೆಟ್​ಗಾಗಿ ನೂಕು ನುಗ್ಗಲು, ಪೊಲೀಸರಿಂದ ಲಾಠಿ ಪ್ರಹಾರ

ರಾಯಚೂರು: ದಿ ವಿಲನ್ ಸಿನಿಮಾ ಟಿಕೆಟ್​ಗಾಗಿ ಅಭಿಮಾನಿಗಳಿಂದ ನೂಕು ನುಗ್ಗಲು ಉಂಟಾಗಿರುವ ಘಟನೆ ಜಿಲ್ಲೆಯ ಸಿಂಧನೂರು ನಗರದ ಸಂಗಮ ಚಿತ್ರಮಂದಿರದಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ತಡೆ ಗಟ್ಟಲು ಮತ್ತು ಶಾಂತಿ ಸುವ್ಯವಸ್ಥೆ ಕಾಯ್ದುಕೊಳ್ಳಲು ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಕಿಚ್ಚಾ ಸುದೀಪ್​ ಹಾಗೂ ಕರುನಾಡ ಚಕ್ರವರ್ತಿ ಶಿವಣ್ಣ ಅಭಿನಯದ ದಿ ವಿಲನ್​ ಚಿತ್ರವನ್ನು ಕಣ್ತುಂಬಿಕೊಳ್ಳಲು  ಅಭಿಮಾನಿಗಳು ಬೆಳಗ್ಗೆಯಿಂದ ಟಿಕೆಟ್​ಗಾಗಿ ಕಾದು ಕುಳಿತಿದ್ದರು, ಆದರೆ ಟಿಕೆಟ್ ಸಿಗದಿದ್ದಕ್ಕೆ ನೂಕು ನುಗ್ಗಲು ಉಂಟಾಗಿದೆ ಎನ್ನಲಾಗಿದೆ.

 

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: conatct@firstnews.tv