ಮೋದಿ ಸಾಧನೆ ಮುಂದಿಟ್ಟು ಚುನಾವಣೆಗೆ ಹೋಗುತ್ತಿದ್ದೇವೆ: ಶೆಟ್ಟರ್

ಹುಬ್ಬಳ್ಳಿ: ನಗರದ ದೇಶಪಾಂಡೆ ನಗರದ ಬಿಜೆಪಿ ಕಚೇರಿಯಲ್ಲಿ ಇಂದು ಲೋಕಸಭಾ ಚುನಾವಣೆ ಪ್ರಚಾರದ ಕಾರ್ಯಾಲಯ ಉದ್ಘಾಟನೆ ಮಾಡಲಾಗಿದೆ. ಕಾರ್ಯಾಲಯದ ಉದ್ಘಾಟನೆಯನ್ನ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಧಾರವಾಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಪ್ರಲ್ಹಾದ್ ಜೋಶಿ ನೇರವೆರಿಸಿದರು.  ‌
ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಜಗದೀಶ್ ಶೆಟ್ಟರ್, ಕಳೆದ 6 ಸಲ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಗೆದ್ದಿದ್ದೇವೆ. ಈ ಬಾರಿ ನಾಲ್ಕನೇ ಬಾರಿಗೆ ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯಾಗಿ ಜೋಶಿಯವರು ಸ್ಪರ್ಧೆ ಮಾಡಿದ್ದಾರೆ. ಮೋದಿಯವರ ಅಲೆ ದೊಡ್ಡ ಪ್ರಮಾಣದಲ್ಲಿದೆ. ಮೋದಿಯವರ ಸಾಧನೆ ಮುಂದಿಟ್ಟು ಚುನಾವಣೆಗೆ ಹೋಗುತ್ತಿದ್ದೇವೆ. ಅವಳಿ ನಗರ ಅಭಿವೃದ್ಧಿಗೆ ಪ್ರಹ್ಲಾದ್ ಜೋಶಿಯವರು ಅಪಾರ ಕೊಡುಗೆ ನೀಡಿದ್ದಾರೆ. ಅವಳಿ ನಗರಕ್ಕೆ ಐಐಟಿ, ಉಡಾನ್ ಯೋಜನೆ ಹಾಗೂ ಸಾವಿರಾರು ಕೋಟಿ‌ ರೂಪಾಯಿ ಅನುದಾನ ತಂದಿದ್ದಾರೆ. ನರೇಂದ್ರ ಮೋದಿಯವರ ಐದು ವರ್ಷದ ಸಾಧನೆಯನ್ನು ತೆಗೆದುಕೊಂಡು ಚುನಾವಣೆಗೆ ಹೋಗುತ್ತಿದ್ದೇವೆ. ಈ ಬಾರಿಯೂ ಪ್ರಹ್ಲಾದ್ ಜೋಶಿಯವರು ಲಕ್ಷಕ್ಕೂ ಹೆಚ್ಚು ಮತದಿಂದ ಗೆದ್ದು ಬರುತ್ತಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಪಕ್ಷದ ಪರ ಅಲೆ ಇದೆ. ದೇಶದಲ್ಲಿ ಬಿಜೆಪಿಗೆ 300ಕ್ಕೂ ಹೆಚ್ಚು ಸೀಟು ಬರುತ್ತವೆ. ಸಿದ್ದರಾಮಯ್ಯ ನವರು ಭ್ರಮೆಯಲ್ಲಿದ್ದಾರೆ. ಹಿಂದೆ ಮುಖ್ಯಮಂತ್ರಿ ಇದ್ದಾಗ ಮತ್ತೊಮ್ಮೆ ಸಿಎಂ ಆಗ್ತೀನಿ ಅಂತಾ ಸಿದ್ದರಾಮಯ್ಯ ಹೇಳಿದ್ರು. ಆದ್ರೆ ಗೆದ್ದಿದ್ದು 80 ಸೀಟು ಮಾತ್ರ ಎಂದು ವ್ಯಂಗ್ಯವಾಡಿದರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv