ಡಿ. 22ರಂದು ಸಚಿವ ಸಂಪುಟ ವಿಸ್ತರಣೆ ನಿಶ್ಚಿತ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಡಿಸೆಂಬರ್ 22ರಂದು ಸಚಿವ ಸಂಪುಟ ವಿಸ್ತರಣೆ ನಿಶ್ಚಿತ. 21 ರಂದು ರಾಹುಲ್ ಗಾಂಧಿಯವರ ಭೇಟಿಗೆ ಸಮಯ ನಿಗದಿಯಾಗಿದ್ದು, ಅಂದೇ ಸಚಿವರ ಪಟ್ಟಿ ಅಂತಿಮಗೊಳಿಸಿ ಘೋಷಣೆ ಮಾಡಲಾಗುತ್ತದೆ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಯಲ್ಲಿ ಸರ್ಕಾರ ಶೀಘ್ರವೇ ಕಾರ್ಯೋನ್ಮುಖವಾಗಬೇಕು. ಕಾನೂನು ತಜ್ಞರು ಸುಪ್ರಿಂ ಕೋರ್ಟ್​ಗೆ ಮನವರಿಕೆ ಮಾಡಿಕೊಡಬೇಕು. ಕಾಮಗಾರಿ ನಿಲ್ಲದಂತೆ ನೋಡಿಕೊಳ್ಳಬೇಕು ಎಂದರು. ಇನ್ನು ಕಂಪ್ಲಿ ಶಾಸಕರ ಗಣೇಶ್​ ಹೇಳಿಕೆಗೆ ಯಾವುದೇ ಮಹತ್ವವಿಲ್ಲ. ಬಿಜೆಪಿ ಬಿಡುಗಡೆ ಮಾಡಿರುವ ಸಿಎಜಿ ಆರೋಪಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ. ನಮ್ಮಲ್ಲಿ ಯಾರೂ ಜೈಲಿಗೆ ಹೋಗಿಲ್ಲ. ನಾವು ಯಾವುದೇ ಅಕ್ರಮ ಮಾಡಿಲ್ಲ ಎಂದರು.