ರಾಜಕೀಯ ಹೊರತಾಗಿ ಯಡಿಯೂರಪ್ಪ ನಾನು ಒಳ್ಳೆಯ ಗೆಳೆಯರು-ಸಿದ್ದರಾಮಯ್ಯ

ಬೆಂಗಳೂರು: ಇಂದು ಬೆಳ್ಳಂ ಬೆಳಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅಚಾನಕ್ ಆಗಿ ಮುಖಾಮುಖಿಯಾಗಿದ್ದರು. ಈ ವೇಳೆ ಇಬ್ಬರು ನಾಯಕರೂ ಹಸ್ತಲಾಘವ ಮಾಡಿ ಉಭಯ ಕುಶಲೋಪರಿ ವಿಚಾರಿಸಿ, ಹೊರಟು ಹೋದರು.

ಈ ಸಂಬಂಧ ಟ್ವೀಟ್​ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ‘ರಾಜಕೀಯ ಜೀವನದ ಹೊರತಾಗಿ ಯಡಿಯೂರಪ್ಪನವರು ಮತ್ತು ನಾನು ಒಳ್ಳೆಯ ಗೆಳೆಯರು. ಇಲ್ಲಿ ಅಧಿಕಾರ, ಅಂತಸ್ತು ಯಾವುದೂ ಶಾಶ್ವತವಲ್ಲ, ಕೊನೆಗೊಂದು ದಿನ‌ ಗೆಲ್ಲುವುದು ನಮ್ಮ ನಡುವಿನ ಮಾನವೀಯ ಸಂಬಂಧಗಳು ಮಾತ್ರ. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಮಾಜಿ ಮುಖ್ಯಮಂತ್ರಿ @BSYBJP ಅವರನ್ನು ಭೇಟಿಯಾದ ಕ್ಷಣ’ ಅಂತಾ ಭೇಟಿ ಸಮಯದ ಫೊಟೊವನ್ನ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಏರ್​​ಪೋರ್ಟ್​​ನಲ್ಲಿ ಮುಖಾಮುಖಿಯಾದ ಮಾಜಿ ಸಿಎಂಗಳು


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv