ಪುತ್ರನ ಜೊತೆ ಬಂದು ಮತ ಚಲಾಯಿಸಿದ ಸಿದ್ದರಾಮಯ್ಯ

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಮತ ಚಲಾಯಿಸಿದ್ದಾರೆ. ಸ್ವಗ್ರಾಮ ಸಿದ್ದರಾಮನ ಹುಂಡಿಯಲ್ಲಿರೋ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 86 ರಲ್ಲಿ ಮತದಾನ ಮಾಡಿದ್ದಾರೆ. ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೂಡ ಅವರ ಜೊತೆ ಬಂದು ಮತದಾನ ಮಾಡಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರತಾಪ್​ ಸಿಂಹ ಮತ್ತು ಮೈತ್ರಿ ಅಭ್ಯರ್ಥಿ ಸಿ.ಎಚ್​​​. ವಿಜಯಶಂಕರ್​​​​ ಸ್ಪರ್ಧೆ ಮಾಡಿದ್ದಾರೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv