ಸೋನಿಯಾ ಗಾಂಧಿ ವಿರುದ್ಧ ನಿಂದನೆ ಆರೋಪ; ರಾಮದಾಸ್​ ವಿರುದ್ಧ ಕೇಸ್​ ಖುಲಾಸೆ

ಬೆಂಗಳೂರು: ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ರಾಮದಾಸ್​ ವಿರುದ್ಧ ದಾಖಲಾಗಿದ್ದ ಕೇಸ್ ಅನ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಖುಲಾಸೆ ಮಾಡಲಾಗಿದೆ. 2014 ರ ಲೋಕಸಭಾ ಚುನಾವಣಾ ವೇಳೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುವಾಗ, ಸೋನಿಯಾ ತಂದೆ ಇಟಲಿ ಸೈನ್ಯದಲ್ಲಿದ್ದರು. ಈ ವೇಳೆ ಸೈನ್ಯದ ಸಿಕ್ರೇಟ್ ದುರ್ಬಳಕೆ ಮಾಡಿಕೊಂಡಿದ್ದರು. ಅವರ ಮಗಳು ಸೋನಿಯಾ ಗಾಂಧಿ ಎಂದಿದ್ದರು. ಈ ಹಿನ್ನೆಲೆಯಲ್ಲಿ ವೈಯಕ್ತಿಕ ನಿಂದನೆ ಮಾಡಿದ್ದರಿಂದ ನೀತಿ ಸಂಹಿತೆ ಉಲ್ಲಂಘನೆ ಅರೋಪದ ಮೇಲೆ ರಾಮದಾಸ್ ವಿರುದ್ಧ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ರಾಮದಾಸ್ ವಿರುದ್ದ ಎಲೆಕ್ಷನ್ ಸ್ಕ್ವಾಡ್ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅರೋಪ ಮುಕ್ತಗೊಳಿಸಿ ಆದೇಶ ಹೊರಡಿಸಿದೆ. ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನಲೆಯಲ್ಲಿ ಕೇಸ್ ಖುಲಾಸೆಗೊಳಿಸಿ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ರಿಂದ ಅರೋಪ ಮುಕ್ತಗೊಳಿಸಿ ಆದೇಶ ಹೊರಡಿಸಿದ್ದಾರೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv