ನಾಳೆ ಹೆಚ್.ಬಿ.ಮಂಜಪ್ಪ ನಾಮಪತ್ರ ಸಲ್ಲಿಕೆ

ದಾವಣಗೆರೆ: ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಬಿ.ಮಂಜಪ್ಪ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯಲ್ಲಿ ಎಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಜೆಡಿಎಸ್ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್​ ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಎಸ್.ಎಸ್. ಮಲ್ಲಿಕಾರ್ಜುನ್​, ನಗರದ ದುರ್ಗಾಂಭಿಕಾ ದೇವಿ ದೇವಾಲಯದಿಂದ ಅದ್ಧೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ. ಒಗ್ಗಟ್ಟಿನಿಂದ ಚುನಾವಣೆ ಮಾಡುತ್ತೇವೆ. ನಮ್ಮ ಕಾರ್ಯಕರ್ತರು ಸೀಟಿ ಹೊಡೆದ್ರೆ ಎದ್ದೆಳುತ್ತಾರೆ, ಬಿಜೆಪಿಯವರು ತರ ಮನೆಗೆ ಹೋಗಿ ಎದ್ದೇಳಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv