ಮೋದಿ ಏನು ಇವರೊಬ್ಬರೇ ಯುದ್ಧ ಮಾಡಿದ ಗಂಡಸಾ? -ಹೆಚ್.ಡಿ.ದೇವೇಗೌಡ

ಚಿಕ್ಕಮಗಳೂರು: ಈಗಿನ ಯುವಕರು ಮೋದಿ-ಮೋದಿ ಅಂತಿದ್ದಾರೆ. ನಾನು ನೋಡದ ಮೋದಿನಾ? ನಾನು ಪಾರ್ಲಿಮೆಂಟ್ ಹೋಗೋದು ಸತ್ಯ. ಮೋದಿಯನ್ನು ಎದುರಿಸುವ ಕೆಚ್ಚು ಈ ರೈತನ ಮಗನಿಗೆ ಇದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಪ್ರಧಾನಿ ಮೋದಿ ವಿರುದ್ಧ ಗುಡುಗಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಹೆಚ್.ಡಿ. ದೇವೇಗೌಡ,  ಸ್ವರ್ಗವನ್ನ ಈ ದೇಶಕ್ಕೆ ತರುತ್ತೇನೆ ಎಂದ ಮನುಷ್ಯ, ರೈತರಿಗೆ ಮೋದಿ ಏನು ಮಾಡಿದ್ದಾರೆ? ಮೋದಿ ಸೈನಿಕರಿಗೆ ಶೂ, ಬಟ್ಟೆ ಜಾಕೆಟ್ ಇರಲಿಲ್ಲ, ನಾವು ಕೊಟ್ಟೆವು ಅಂತಿದ್ದಾರೆ. ವಾಜಪೇಯಿ ಇದ್ದಾಗ ಕಾರ್ಗಿಲ್ ಯುದ್ಧ ಮಾಡುವಾಗ ನಮ್ಮ ಸೈನಿಕರಿಗೆ ಏನು ಇರಲಿಲ್ವಾ? ಸೈನಿಕರಿಗೆ ನಾವೇ ಎಲ್ಲವನ್ನು ನೀಡಿದ್ದೇವೆ ಎನ್ನುವವರಿಗೆ ನಾಚಿಕೆ ಆಗಬೇಕು. ಯುವಕರು ಸೋಶಿಯಲ್ ಮೀಡಿಯಾಗಳ ಹಿಂದೆ ಬಿದ್ದು ಮೋಸ ಹೋಗಬಾರದು. ನಾವೇ ಯುದ್ಧ ಮಾಡಿದ್ದು ಅಂತಾ ಮೀಡಿಯಾ ಇಟ್ಕೊಂಡು ಬೊಬ್ಬೆ ಹೊಡೆಯುತ್ತಾ ಇದ್ದಾರೆ. ಏನು ಇವರೊಬ್ಬರೇ ಯುದ್ಧ ಮಾಡಿದ ಗಂಡಸಾ ಎಂದು ದೇವೇಗೌಡರು ಮೋದಿಯವರನ್ನ ಪ್ರಶ್ನೆ ಮಾಡಿದ್ದಾರೆ. ಹಿಂದೆ ಕಾಂಗ್ರೆಸ್ ಬೇರೆ ಪಕ್ಷಗಳು ಇದ್ದಾಗಲೂ ದೇಶದಲ್ಲಿ ಯುದ್ಧ ನಡೆದಿದೆ. ಈ ದೇಶ ಆಳುವ ಶಕ್ತಿ ನಮಗೆ ಅಥವಾ ಸಿದ್ದರಾಮಯ್ಯ ಅಂತಾ ನಾಯಕರಿಗೆ ಇಲ್ವಾ ಎಂದು ಮಾಧ್ಯಮದವರನ್ನ ಪ್ರಶ್ನೆ ಮಾಡಿದ್ದಾರೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv