ದಾವಣಗೆರೆ ರೈಲು ನಿಲ್ದಾಣದ ಹೊಸ ಕಟ್ಟಡಕ್ಕೆ ಶಂಕುಸ್ಥಾಪನೆ

ದಾವಣಗೆರೆ:  ನಗರದ ರೈಲು ನಿಲ್ದಾಣದ ಹೊಸ ಕಟ್ಟಡದ ಶಂಕುಸ್ಥಾಪನೆಯನ್ನ ಸಂಸದ ಜಿ.ಎಂ.ಸಿದ್ದೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್.ಶ್ರೀನಿವಾಸ್ ನೆರವೇರಿಸಿದರು. ಈಗಿರುವ ದಾವಣಗೆರೆ ರೈಲ್ವೆ ನಿಲ್ದಾಣದಲ್ಲೇ, ನೈರುತ್ಯ ರೈಲ್ವೆ ವಿಭಾಗದ ವತಿಯಿಂದ ಶಂಕುಸ್ಥಾಪನೆ ಕಾರ್ಯಕ್ರಮ ನಡೆಸಲಾಯಿತು.  ಬಳಿಕ ಸಂಸದ ಜಿ.ಎಂ. ಸಿದ್ದೇಶ್ವರ್ ಮಾತನಾಡಿ, ರೈಲು ನಿಲ್ದಾಣದಲ್ಲಿ ಜನದಟ್ಟನೆ ಹೆಚ್ಚಿದ ಹಿನ್ನಲೆಯಲ್ಲಿ 19 ಕೋಟಿ ರೂಪಾಯಿಗಳಲ್ಲಿ ನಿಲ್ದಾಣಕ್ಕೆ ಪ್ರವೇಶ ದ್ವಾರ ನಿರ್ಮಾಣ ಕಾರ್ಯ ನಡೆಸಲಾಗುತ್ತದೆ. ಮುಂದಿನ ಒಂದು ವರ್ಷದಲ್ಲಿ ಕಾಮಗಾರಿ ಮುಗಿಸುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು.