ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ, ಸಾಲಮನ್ನಾಕ್ಕೆ ಗಡುವು-ಗಿಡುವು ಇಲ್ಲ..!

ಬೆಂಗಳೂರು: ಸಿಎಂ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಮ್ಮಿಶ್ರ ಸರಕಾರವು ಪದವಿವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ನಿರ್ಧರಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಸಂಜೆ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಾತ್ಯಾತೀತವಾಗಿ ಎಲ್ಲ ವಿದ್ಯಾರ್ಥಿಗಳಿಗೂ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ ಉಚಿತ ಬಸ್ ಪಾಸ್ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯ ತೀರ್ಮಾನವನ್ನು ಸುದ್ದಿಗಾರಿಗೆ ತಿಳಿಸಿದರು.

ಸಾಲಮನ್ನಾ ಮಾಡಲು ಗಡುವು-ಗಿಡುವು ಇಲ್ಲ:
ಇದೇ ವೇಳೆ, ಸಮನ್ವಯ ಸಮಿತಿ ಸಭೆ ಬಳಿಕ ಡಿಸಿಎಂ ಡಾ. ಜಿ ಪರಮೇಶ್ವರ್ ಸುದ್ದಿಗಾರರ ಜತೆ ಮಾತನಾಡಿ, ಸಾಲಮನ್ನಾ ಮಾಡಲು ಕುಮಾರಸ್ವಾಮಿ ಸ್ವಾಮಿ ತೆಗೆದುಕೊಂಡ ಗಡುವು ಸಮೀಪಿಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಗಡುವು-ಗಿಡುವು ಇಲ್ಲ, ಇದು ಹಣಕಾಸಿನ ವಿಚಾರ. ಹೆಚ್ಚು ಸಮಯ ಬೇಕಾಗುತ್ತೆ ಎಂದು ಹೇಳಿದರು. ಇನ್ನು, ಸಚಿವ ಸಂಪುಟ ವಿಸ್ತರಣೆಯನ್ನು ಹೈ ಕಮಾಂಡ್ ಜೊತೆ ಚರ್ಚಿಸಿ ತೀರ್ಮಾನ ತೆಗೆದು ಕೊಳ್ಳಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರ ನೇಮಕವನ್ನು ಸಿಎಂ ಅವರು ನೋಡಿಕೊಳ್ಳುತ್ತಾರೆ. ಅದು ಆಡಳಿತಾತ್ಮಕ ವಿಚಾರ ಎಂದು ತಿಳಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv