ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದ ಜಿ.ಪರಮೇಶ್ವರ್

ತುಮಕೂರು: ಇಂದು ಸಿದ್ದಗಂಗಾ ಮಠಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭೇಟಿ ನೀಡಿದರು. ಡಿಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಹಳೆಯ ಮಠದ ಆವರಣದಲ್ಲಿ ಕಿರಿಯ ಶ್ರೀಗಳು, ಜಿ.ಪರಮೇಶ್ವರ್​​ಗೆ ಸ್ವಾಗತ ಕೋರಿದರು. ಇನ್ನು ಡಿಸಿಎಂ ಪರಮೇಶ್ವರ್​​ಗೆ ತುಮಕೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆಂಚಮಾರಯ್ಯ, ರಾಯಸಂದ್ರ ರವಿಕುಮಾರ್ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv