ಶಿವಳ್ಳಿ ನಮ್ಮೆಲ್ಲರಿಗೂ ಆತ್ಮೀಯ ಸ್ನೇಹಿತರಾಗಿದ್ರು: ಡಿಸಿಎಂ ಜಿ.ಪರಮೇಶ್ವರ್

ಹುಬ್ಬಳ್ಳಿ: ಸಚಿವ ಶಿವಳ್ಳಿ ನಮ್ಮೆಲ್ಲರಿಗೂ ಆತ್ಮೀಯ ಸ್ನೇಹಿತರಾಗಿದ್ರು. ಅವರನ್ನ ಕಳೆದುಕೊಂಡು ನಮಗೆಲ್ಲ ಬಹಳ ನೋವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಡಿಸಿಎಂ ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ. ಸಾಮಾನ್ಯ ಕುಟುಂಬದಿಂದ ಬಂದು ಮೂರು ಬಾರಿ ಶಾಸಕರಾಗಿದ್ರು. ಸಂಪುಟದಲ್ಲಿ ನಮ್ಮ ಜೊತೆಗಿದ್ದ ಸಚಿವ ಶಿವಳ್ಳಿ ತೀರಿಕೊಂಡಿರೋದು ನಮಗೆ ಬಹಳ ನೋವಾಗಿದೆ ಎಂದು ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv