ಮತದಾನ ಮಾಡಿದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈರುತ್ಯ ಪದವೀಧರ  ಕ್ಷೇತ್ರದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಪದವೀಧರ ಕ್ಷೇತ್ರ 23 ಮತಗಟ್ಟೆಗಳು, ಶಿಕ್ಷಕರ ಕ್ಷೇತ್ರದಲ್ಲಿ 14 ಮತಗಟ್ಟೆಗಳಿವೆ. ಐದು ಜಿಲ್ಲೆಗಳ ವ್ಯಾಪ್ತಿ ಇರುವ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಇದೆ. ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ವೈ ರಾಮಪ್ಪ, ಜೆಡಿಎಸ್ ಅಭ್ಯರ್ಥಿ ರಮೇಶ್ ಬಾಬು ಸ್ಪರ್ಧಿಸಿದ್ದಾರೆ. ನೈರುತ್ಯ ಶಿಕ್ಷಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಂಗಳೂರಿನ ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಮತದಾನ ಮಾಡಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv