ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ವಶ

ಬಾಗಲಕೋಟೆ: ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿರುವ ಘಟನೆ ಹುನಗುಂದ ತಾಲೂಕಿನ ಗುಡೂರು ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ತಹಶೀಲ್ದಾರ್ ಎಸ್.ಎಸ್. ಸಂಪಗಾಂವಿ ನೇತೃತ್ವದಲ್ಲಿ ಆಹಾರ ಇಲಾಖೆ ಅಧಿಕಾರಿ ಸೇರಿದಂತೆ ಪೊಲೀಸರು ನಿನ್ನೆ ದಾಳಿ ನಡೆಸಿದ್ರು. ಪಡಿತರ ಕಾರ್ಡ್‌ದಾರರಿಗೆ ವಿತರಿಸಬೇಕಿದ್ದ 5 ಕ್ವಿಂಟಾಲ್​ ಅಕ್ಕಿ ಮೂಟೆಯನ್ನು ಮಾಗುಂಡಪ್ಪ ಅಳಗುಂಡಿ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆಗೆ ತಹಶೀಲ್ದಾರ್ ಸೂಚಿಸಿದ್ದಾರೆ. ಬಳಿಕ ಇದೇ ಗ್ರಾಮದ ರಸ್ತೆ ಬದಿಯಲ್ಲಿದ್ದ ಹೋಟೆಲ್​ಗಳಲ್ಲಿ ಅಕ್ರಮವಾಗಿ ಬಳಸುತ್ತಿದ್ದ 6 ಗ್ಯಾಸ್​ ಸಿಲಿಂಡರ್​ಗಳನ್ನು ಜಪ್ತಿ ಮಾಡಲಾಗಿದೆ.