ಗೌರಿ ಲಂಕೇಶ್ ಹತ್ಯೆ ಕೇಸ್​​: ಆರೋಪಿ ನವೀನ್ ಕುಮಾರ್ ಜಾಮೀನು ಅರ್ಜಿ ವಜಾ

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ನವೀನ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜ ಗೌರಿ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಎಸ್ಐಟಿ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು 70ನೇ ಸಿಸಿಎಚ್ ಕೋರ್ಟ್​​​ನಲ್ಲಿ ನವೀನ್ ಜಾಮೀನು ಅರ್ಜಿ ಸಲ್ಲಿಸಿದ್ದ. ಆದ್ರೆ ನ್ಯಾಯಧೀಶ ಟಿಪಿ ರಾಮಲಿಂಗೇಗೌಡ ಅವರು ನವೀನ್​​ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ವಜಾಗೊಳಿಸಿದ್ರು.