ವಾಲ್ಮೀಕಿ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಸ್ವಾಮೀಜಿ ಆಗ್ರಹ

ದಾವಣಗೆರೆ: ವಾಲ್ಮೀಕಿ ಸಮಾಜದ ಇನ್ನೂ ಇಬ್ಬರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು. ಇಲ್ಲದಿದ್ರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ತಕ್ಕ ಪಾಠ ಕಲಿಯಬೇಕಾಗುತ್ತದೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನಾನಂದ ಪುರಿ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಸ್ವಾಮೀಜಿ, ಕಾಂಗ್ರೆಸ್​ನಲ್ಲಿ 9 ಜನ ಶಾಸಕರಲ್ಲಿ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದೆ. ರಾಜ್ಯದಲ್ಲಿ 50 ಲಕ್ಷ ವಾಲ್ಮೀಕಿ ಜನಾಂಗದವರಿದ್ದಾರೆ. ನಮ್ಮ ಸಮಾಜದ ಬಗ್ಗೆ ಗಮನ ಹರಿಸದಿದ್ರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸ್ವಾಮೀಜಿ ಎಚ್ಚರಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv