ದಾವಣಗೆರೆಗೆ ಜಿ.ಎನ್ ಶಿವಮೂರ್ತಿ ನೂತನ ಜಿಲ್ಲಾಧಿಕಾರಿ

ದಾವಣಗೆರೆ: ಲೋಕ ಸಭಾ ಚುಣಾವಣೆ ಸಮೀಪಿಸುತ್ತಿದ್ದಂತೆ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದಾವಣಗೆರೆ ನೂತನ ಜಿಲ್ಲಾಧಿಕಾರಿಯನ್ನಾಗಿ ಜಿ.ಎನ್ ಶಿವಮೂರ್ತಿ ಅವರನ್ನ ನೇಮಿಸಲಾಗಿದೆ. ನೂತನ ಜಿಲ್ಲಾಧಿಕಾರಿ ಜಿ.ಎನ್ ಶಿವಮೂರ್ತಿ ಇಂದು ದಾವಣಗೆರೆಯ ಜಿಲ್ಲಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದರು. ಈ ಮೊದಲು ಜಿ.ಎನ್ ಶಿವಮೂರ್ತಿ ಅವರು ಬೆಂಗಳೂರಿನ ಉದ್ಯಮಶೀಲತೆ ಹಾಗೂ ಜೀವನಶೈಲಿ ಅಭಿವೃದ್ಧಿ ಇಲಾಖೆಯಲ್ಲಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಡಾ. ಬಗಾದಿ ಗೌತಮ್ ಅವರನ್ನ ಚಿಕ್ಕಮಗಳೂರಿಗೆ ವರ್ಗಾಯಿಸಲಾಗಿದೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv