ಗೋಕರ್ಣ ದೇಗುಲ,ರಾಮಚಂದ್ರಾಪುರ ಮಠದ ಸುಪರ್ದಿಯಲ್ಲೇ ಇರಲಿ:ಸುಪ್ರೀಂಕೋರ್ಟ್

ಕಾರವಾರ: ಸದ್ಯಕ್ಕೆ ಗೋಕರ್ಣ ದೇಗುಲವು ರಾಮಚಂದ್ರಾಪುರ ಮಠದ ಸುಪರ್ದಿಯಲ್ಲೇ ಇರಲಿ ಎಂದು ಸುಪ್ರೀಂಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ.
ರಾಜ್ಯ ಸರ್ಕಾರದ ವಿರುದ್ಧ ರಾಮಚಂದ್ರಾಪುರ ಮಠ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಕುರಿಯನ್ ಜೋಸೆಫ್, ನ್ಯಾ.ಎ.ಎಂ.ಖಾನ್ವಿಲ್ಕರ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್​ ದ್ವಿಸದಸ್ಯ ಪೀಠ, ಅಂತಿಮ ತೀರ್ಪು ಪ್ರಕಟವಾಗುವವರೆಗೂ ಗೋಕರ್ಣ ದೇಗುಲದ ಹಸ್ತಾಂತರ ಪ್ರಕ್ರಿಯೆ ಬೇಡ ಎಂದು ಸ್ಪಷ್ಟಪಡಿಸಿದೆ.
ದೇವಾಲಯದ ಆಡಳಿತ ಮೇಲ್ವಿಚಾರಣೆಗಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ನೇತೃತ್ವದಲ್ಲಿ, ರಾಜ್ಯ ಸರ್ಕಾರ ಉತ್ತರ ಕನ್ನಡ ಜಿಲ್ಲಾಧಿಕಾರಿ ಸೇರಿ 6 ಸದಸ್ಯರ ಉಸ್ತುವಾರಿ ಸಮಿತಿ ರಚಿಸಿತ್ತು. ಇದನ್ನು ಪ್ರಶ್ನಿಸಿ ರಾಮಚಂದ್ರಾಪುರ ಮಠ ಸುಪ್ರೀಂಗೆ ಅರ್ಜಿ ಸಲ್ಲಿಸಿತ್ತು. ಗೋಕರ್ಣ ದೇಗುಲದ ಉಸ್ತುವಾರಿಯನ್ನು ಜಿಲ್ಲಾಡಳಿತಕ್ಕೆ ನೀಡಿದ್ದ ಸರ್ಕಾರದ ಆದೇಶವನ್ನು ಹಿಂಪಡೆಯುವಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv