ಸರ್ಕಾರ್​ ಟೇಕಾಪ್​​ ಆಗಿಲ್ಲಂದ್ರೆ ನಾನ್ಯಾಕೆ ಪ್ರವಾಸ ಮಾಡ್ತಾ ಇದ್ದೇ..!

ಚಿತ್ರದುರ್ಗ: ಕೃಷಿ ಸಚಿವ ಶಿವಶಂಕರ ರೆಡ್ಡಿ ಇಂದು ಚಿತ್ರದುರ್ಗ ಕೃಷಿ ಇಲಾಖೆಗೆ ಭೇಟಿ ನೀಡಿದರು. ಕೃಷಿ ಇಲಾಖೆಯಲ್ಲಿ ಅಧಿಕಾರಿಗಳೊಂದಿಗೆ ಬಿತ್ತನೆ ಬೀಜ, ಗೊಬ್ಬರ, ವಿಮೆ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಇಲಾಖೆಗೆ ಆಗಮಿಸಿದ್ದೇನೆ ಎಂದು ಸಚಿವರು ಹೇಳಿದರು.
ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಜಿಲ್ಲೆಯ ಕೃಷಿ ಚಟುವಟಿಕೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಬಂದಿದ್ದೇನೆ. ಬಿತ್ತನೆ ಬೀಜ, ಗೊಬ್ಬರಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇನೆ ಎಂದರು.
ಇನ್ನು, ಉಸ್ತುವಾರಿ ಸಚಿವರ ನೇಮಕದ ಬಗ್ಗೆ ಅನೌಪಚಾರಿಕವಾಗಿ ಚರ್ಚೆಯಾಗಿದೆ. ಸಮ್ಮಿಶ್ರ ಸರ್ಕಾರ ಈಗಾಗಲೇ ಟೇಕಾಪ್​ ಆಗಿದೆ. ಆದರಿಂದಾಗಿ ನಾನು ಪ್ರವಾಸ ಮಾಡ್ತಾ ಇದ್ದೇನೆ. ಟೇಕಾಪ್ ಆಗಿಲ್ಲಂದ್ರೆ ನಾನ್ಯಾಕೆ ಪ್ರವಾಸ ಮಾಡ್ತಿದ್ದೆ ಎಂದು ಖಾರವಾಗಿ ಹೇಳಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv