ಕಾಂಗ್ರೆಸ್​​ಗೆ ಒಂದು, ಬಿಜೆಪಿಗೊಂದು ಪದವೀಧರ ಕ್ಷೇತ್ರ

ವಿಧಾನಪರಿಷತ್​ಗೆ ನಡೆದ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಮೊದಲ ಪ್ರಾಶಸ್ತ್ಯದ 4 ಸುತ್ತುಗಳ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿತ್ತು. ಆದ್ರೆ, ಅಂತಿಮವಾಗಿ ಮತದಾರರು ‘ಕೈ’ ಬಿಡದಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ್ ಹುಮನಾಬಾದ್ ಗೆಲುವಿನ ನಗೆ ಬೀರಿದ್ರು. ಚಂದ್ರಶೇಖರ್ ಪಾಟೀಲ್​ಗೆ 321 ಮತಗಳ‌ ಅಂತರದಿಂದ ವಿಜಯಲಕ್ಷ್ಮಿ ಒಲಿಯುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿತ್ತು. ಈ ಮೂಲಕ ಕಾಂಗ್ರೆಸ್ ಬಿಜೆಪಿ ಭದ್ರಕೋಟೆಯನ್ನ ವಶಪಡಿಸಿಕೊಂಡಿದೆ. ಚಂದ್ರಶೇಖರ್ ಪಾಟೀಲ್ 18,768 ಮತಗಳನ್ನ ಪಡೆದ್ರೆ, ಬಿಜೆಪಿಯ ಕೆ.ಬಿ. ಶ್ರೀನಿವಾಸ್ 18,447 ಮತಗಳನ್ನ ಪಡೆದ್ರು.

ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಕಮಲ ಅರಳಿದೆ. ಮೊದಲ ಸುತ್ತಿನ ಎಣಿಕೆಯಿಂದಲೇ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿ ಅಭ್ಯರ್ಥಿ ಆಯನೂರು ಮಂಜುನಾಥ್ ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಆಯನೂರು ಮಂಜುನಾಥ್ ಗೆಲುವಿನ ನಗೆ ಬೀರಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ:cantact@firstnews.tv