ಇಂದು ಶಿಕ್ಷಕರ, ಪದವೀಧರ ಕ್ಷೇತ್ರಗಳ ಚುನಾವಣಾ ಫಲಿತಾಂಶ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್​ಗೆ ನಡೆದ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಆಗ್ನೇಯ, ನೈಋತ್ಯ, ಈಶಾನ್ಯ, ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಕ್ಕೆ ಜೂನ್ 8ರಂದು ಮತದಾನ ನಡೆದಿತ್ತು. ಮತ ಏಣಿಕೆ ಇಂದು ನಡೆಯಲಿದೆ.

ಬೆಂಗಳೂರು, ಕಲ್ಬುರ್ಗಿ, ಶಿವಮೊಗ್ಗ, ತುಮಕೂರು ಹಾಗೂ ಮೈಸೂರಿನಲ್ಲಿ ಮತ ಏಣಿಕೆ ನಡೆಯಲಿದೆ. ಬೆಂಗಳೂರು ಪದವೀಧರ ಕ್ಷೇತ್ರದ ಮತ ಏಣಿಕೆ, ಬೆಂಗಳೂರಿನ ಆರ್.ಸಿ.ಕಾಲೇಜಿನಲ್ಲಿ ನಡೆಯುತ್ತದೆ. ಬಿಜೆಪಿಯಿಂದ ಅ.ದೇವೇಗೌಡ, ಕಾಂಗ್ರೆಸ್​ನಿಂದ ರಾಮೋಜಿಗೌಡ, ಜೆಡಿಎಸ್​ನಿಂದ ಅಚ್ಚೇಗೌಡ ಶಿವಣ್ಣ ಸೇರಿದಂತೆ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ 16 ಮಂದಿ ಕಣದಲ್ಲಿದ್ದರು. ಬೆಳಗ್ಗೆ 8 ಗಂಟೆಯಿಂದ ಮತ ಏಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದೊಳಗೆ ಫಲಿತಾಂಶ ಘೋಷಣೆಯಾಗುವ ಸಾಧ್ಯತೆಯಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv