ಅಸ್ಸಾಂನಲ್ಲಿ ಗ್ರೆನೇಡ್ ಸ್ಫೋಟ, ಇಬ್ಬರು ಸಾವು

ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿ ಗ್ರೆನೇಡ್​ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಸ್ಫೋಟದ ತೀವ್ರತೆಗೆ 10 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಗುವಾಹಟಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದ ಝೂ ರಸ್ತೆಯಲ್ಲಿರುವ ಮಾಲ್ ಒಂದರ ಎದುರು ಗ್ರನೇಡ್​ ಸ್ಫೋಟಗೊಂಡಿದೆ. ಸದ್ಯ ಘಟನಾ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಹಾಗೂ ಪೊಲೀಸ್ ಕಮಿಷನರ್ ದೀಪಕ್ ಕುಮಾರ್ ಭೇಟಿ ನೀಡಿದ್ದಾರೆ. 8 ಗಂಟೆ ಸುಮಾರಿಗೆ ಸ್ಫೋಟಗೊಂಡಿದೆ ಎನ್ನಲಾಗಿದ್ದು ಪೊಲೀಸ್ ಅಧಿಕಾರಿಗಳು ತನಿಖೆಯನ್ನ ಮುಂದುವರಿಸಿದ್ದಾರೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv