ರಾಜ್ಯದಲ್ಲಿ ಯಾವುದೇ ಆಪರೇಷನ್ ಕಮಲ ನಡೆಯುತ್ತಿಲ್ಲ- ಜಿ.ಟಿ ದೇವೇಗೌಡ

ಮೈಸೂರು: ಸಮ್ಮಿಶ್ರ ಸರ್ಕಾರದಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿವೆ. ನಿನ್ನೆ ಸರ್ಕಾರದಲ್ಲಿ ಸಚಿವರಾಗಿದ್ದ ಎನ್​. ಮಹೇಶ್​ ರಾಜೀನಾಮೆ ನೀಡಿದ್ದು, ಬಿಜೆಪಿ ಪಕ್ಷ ಸರ್ಕಾರ ರಚಿಸಲು ಯತ್ನಿಸುತ್ತಿದೆ. ಇದಕ್ಕೆ ಪೂರಕವೆಂಬಂತೆ ಜಗದೀಶ್​ ಶೆಟ್ಟರ್​​, ಈ ಸರ್ಕಾರ ಬೀಳುವುದಕ್ಕೆ ಇದು ಮೊದಲನೇ ಮೆಟ್ಟಿಲು ಎಂಬ  ಹೇಳಿಕೆ ನೀಡಿದ್ದಾರೆ. ಆದ್ದರಿಂದಾಗಿ ಸಮ್ಮಿಶ್ರ ಸರ್ಕಾರಕ್ಕೆ ಆಪರೇಷನ್​ ಕಮಲ ಭೀತಿ ಎದುರಾಗಿದೆ.

ಆದ್ರೆ ಈ ಭೀತಿಯನ್ನು ಅಲ್ಲಗಳೆದಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ, ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯುತ್ತಿಲ್ಲ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಯಾವುದೇ ಬಿಜೆಪಿ ನಾಯಕರು ಸಂಪರ್ಕ ಮಾಡಿಲ್ಲ. ಸ್ಥಳೀಯ ಬಿಜೆಪಿ ನಾಯಕರು ಕೂಡ ನನ್ನ ಜೊತೆ ಇದ್ದಾರೆ. ಆದರೆ ಯಾರು ಕೂಡ‌ ಪಕ್ಷದ ಬಗ್ಗೆ ಮಾತನಾಡಿಲ್ಲ ಎಂದರು.