ಡಿಸಿ ಕಚೇರಿ ಎದುರು ಅತಿಥಿ ಉಪನ್ಯಾಸಕರ ಪ್ರತಿಭಟನೆ

ದಾವಣಗೆರೆ: ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕೆಂದು ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲೆಯ ವಿವಿಧ ಕಾಲೇಜುಗಳ ಅತಿಥಿ ಉಪನ್ಯಾಸಕರು ಇಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದರು.

ಪ್ರತಿಭಟನೆಯಲ್ಲಿ ಮಾತನಾಡಿದ ಅತಿಥಿ ಉಪನ್ಯಾಸಕ ಡಾ. ಪ್ರಭಾಕರ ಎಂ, ರಾಜ್ಯಾದ್ಯಂತ ಸುಮಾರು 13 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರು ವಿವಿಧ ಕಾಲೇಜುಗಳಲ್ಲಿ ಹದಿನೈದು ಇಪ್ಪತ್ತು ವರ್ಷಗಳಿಂದ ಅತಿ ಕಡಿಮೆ ವೇತನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ಎಲ್ಲ ಅರ್ಹತೆ ಇದ್ದರೂ ಕೂಡ ಯಾವುದೇ ಸೇವಾ ಭದ್ರತೆ ಇಲ್ಲ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿರುವವರ ಭವಿಷ್ಯ ಇಂದು ಬೀದಿಪಾಲಾಗುತ್ತಿದೆ. ಎಲ್ಲ ಅರ್ಹತೆ ಇದ್ರೂ ಸರ್ಕಾರದಿಂದ ಹೊಸ ಅಭ್ಯರ್ಥಿಗಳ ನೇಮಕ ಪ್ರಕ್ರೀಯೆ ಮುಂದುವರೆದಿದೆ ಇದರಿಂದ ಅತಿಥಿ ಉಪನ್ಯಾಸಕರಿಗೆ ಆತಂಕ ಎದುರಾಗಿದೆ. ಅನೇಕ ವಿದ್ಯಾರ್ಥಿಗಳು ಇಂದು ಅತೀ ದೊಡ್ಡ ದೊಡ್ಡ ಹುದ್ದೆ ಅಲಂಕರಿಸಿದ್ದಾರೆ. ಅಂಥವರಿಗೆ ಬೆಂಗಾವಲಾಗಿದ್ದ ನಮ್ಮಂಥವರ ಬದುಕು ಬೀದಿಪಾಲಾಗುತ್ತಿದೆ. ಜನಪ್ರತಿನಿಧಿಗಳು ನಮ್ಮ ಸಮಸ್ಯೆಗೆ ಸ್ಪಂದಿಸಿ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಸುಮಾರ 500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿದ್ದಾರೆ. ಕಳೆದ ಆರೇಳು ತಿಂಗಳಿಂದ ಸಂಬಳವಿಲ್ಲದೇ ಸಾಲ ಮಾಡಿ ಕೆಲಸ ನಿರ್ವಹಿಸುತ್ತದ್ದೇವೆ ಎಂದು ತಮ್ಮ ಅಳಲನ್ನು ತೋಡಿಕೊಂಡರು. ಹೀಗಾಗಿ ಅಹೋರಾತ್ರಿ ಧರಣಿಗೆ ಮುಂದಾಗಿದ್ದು ಅನಿವಾರ್ಯವಾಗಿದೆ ಎಂದು ಹೇಳಿದರು. ಕೂಡಲೇ ಸರ್ಕಾರ ನಮ್ಮ ಸೇವೆಯನ್ನು ಪರಿಗಣಿಸಿ ಸೇವಾ ಭದ್ರತೆ ಒದಗಿಸಬೇಕೆಂದು ಪಟ್ಟು ಹಿಡಿದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: conatct@firstnews.tv