ಜೆಡಿಎಸ್​ ಅಭ್ಯರ್ಥಿ ಬೆಂಬಲಿಸಲು ಅತಿಥಿ ಉಪನ್ಯಾಸಕರ ನಿರ್ಧಾರ

ಬಳ್ಳಾರಿ: ಈಶಾನ್ಯ ಪದವೀಧರ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರತಾಪ್ ರೆಡ್ಡಿಗೆ ಬೆಂಬಲ ನೀಡಲು ಅತಿಥಿ ಉಪನ್ಯಾಸಕರು ಒಮ್ಮತದ ನಿರ್ಣಯ ಕೈಗೊಂಡಿದ್ದಾರೆ. ಈ ಬಗ್ಗೆ ಇಂದು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸೋದಾಗಿ ಸಿಎಂ ಕುಮಾರಸ್ವಾಮಿ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ್ದಾರೆ. ಮೌಖಿಕವಾಗಿಯೂ ಭರವಸೆ ನೀಡಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರ ಮೇಲಿನ ನಂಬಿಕೆಯಿಂದ ನಾವೆಲ್ಲರೂ ಜೆಡಿಎಸ್​​​​​ಗೆ ಬೆಂಬಲ ನೀಡಿದ್ದೇವೆ ಅಂತಾ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿ ಜಿಲ್ಲಾ ಅಧ್ಯಕ್ಷ ಟಿ.ದುರಗಪ್ಪ ಹೇಳಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv