ಗುಜರಿ ಅಂಗಡಿಗೆ ಆಕಸ್ಮಿಕ ಬೆಂಕಿ, ವಸ್ತುಗಳು ಸುಟ್ಟು ಭಸ್ಮ

ಯಾದಗಿರಿ: ಗುಜರಿ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಮೌಲ್ಯದ ಗುಜರಿ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಯಾದಗಿರಿ ನಗರದ ಮಕ್ಕಾಮಜ್ಜೀದ್ ಬಳಿ ಇರುವ ಕಾಂಪ್ಲೆಕ್ಸ್​ವೊಂದರಲ್ಲಿ ನಡೆದಿದೆ. ಘಟನೆಯಲ್ಲಿ ಕಾಂಪ್ಲೆಕ್ಸ್​​​​​ನಲ್ಲಿದ್ದ ಗುಜರಿ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಗುಜರಿ ಅಂಗಡಿಗೆ ತಗುಲಿದ ಬೆಂಕಿ ಪಕ್ಕದಲ್ಲಿರುವ ಅಂಗಡಿಗಳಿಗೂ ತನ್ನ ಕೆನ್ನಾಲಿಗೆ ಚಾಚಿದೆ.
ಬೆಂಕಿಗಾಹುತಿಯಾದ ಗುಜರಿ ಅಂಗಡಿ ಅಬ್ದುಲ್ ರೆಹಮಾನ್​​​ ಎಂಬವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಪಕ್ಕದ ಕಿರಾಣಿ ಅಂಗಡಿ, ಕಟಿಂಗ್​​​ ಸಲೂನ್​​​ ಹಾಗೂ ಕಟ್ಟಿಗೆಯ ಅಂಗಡಿಗಳಿಗೂ ಬೆಂಕಿ ಆವರಿಸಿದೆ. ಶಾರ್ಟ್​ ಸರ್ಕ್ಯೂಟ್​ನಿಂದ ಈ ಘಟನೆ ಸಂಭವಿಸಿರಬಹುದು ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಕಾರ್ಯಾಚರಣೆ ಕೈಗೊಂಡರು. ಘಟನಾ ಸ್ಥಳಕ್ಕೆ ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಭೇಟಿ ನೀಡಿ, ಹಾನಿಗೊಳಗಾದ ಅಂಗಡಿ ಮಾಲೀಕರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv