ಕೋಲಾರದಲ್ಲಿ ಆಲಿಕಲ್ಲು ಮಳೆಯ ಅಬ್ಬರ

ಕೋಲಾರ:ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಮಳೆಯ ಅಬ್ಬರ ಜೋರಾಗಿದೆ. ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಹೋಬಳಿಯ ಸುತ್ತಮುತ್ತ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಬಿದ್ದಿದೆ. ಬೃಹತ್ ಗಾತ್ರದ ಆಲಿ ಕಲ್ಲು ಮಳೆ ಬಿದ್ದಿರೋದ್ರಿಂದ ರೈತರ ಬೆಳೆಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿ ಆಗಿದೆ. ಇದ್ರಿಂದ ರೈತರು ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಬೆಳೆಗಳು ನಾಶಗೊಂಡಿದ್ದು,ರೈತರು ಪರಿತಪಿಸುವಂತಾಗಿದೆ.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv