ಹಾರಂಗಿ ಜಲಾಶಯ ಭರ್ತಿಗೆ ಕೇವಲ 4 ಅಡಿ ಬಾಕಿ..!

ಕೊಡಗು: ಜಿಲ್ಲಾದ್ಯಾಂತ ಭಾರೀ ಮಳೆಯಾಗುತ್ತಿದ್ದು ಜಿಲ್ಲೆಯ ನದಿ ತೊರೆಗಳು ಮೈದುಂಬಿ ಹರಿಯುತ್ತಿವೆ. ಕಾವೇರಿ ನದಿ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯ ಭರ್ತಿಗೆ ಕೇವಲ 4 ಅಡಿ ಬಾಕಿ ಇದೆ. ಡ್ಯಾಂಗೆ ಪೂಜೆ ಸಲ್ಲಿಸಿದ ಅಧಿಕಾರಿಗಳು, ಹೆಚ್ಚುವರಿ 1200 ಕ್ಯೂಸೆಕ್ ನೀರನ್ನು 4 ಕ್ರಸ್ಟ್ ಗೇಟ್ ಗಳ ಮೂಲಕ ಡ್ಯಾಮ್ ನಿಂದ ನದಿಗೆ ಬಿಟ್ಟರು. 2859 ಅಡಿ ಸಾಮರ್ಥ್ಯದ ಜಲಾಶಯದಲ್ಲಿ 2852.49 ಅಡಿ ನೀರು ಸಂಗ್ರಹವಾಗಿದ್ದು ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಹಾರಂಗಿ ಜಲಾಶಯದ ಕಾರ್ಯಪಾಲಕ ಎಂಜಿನಿಯರ್ ಧರ್ಮರಾಜ್ ಸೂಚನೆ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv