ಹರಪನಹಳ್ಳಿ ತಾಲೂಕು ಅಧಿಕೃತವಾಗಿ ಬಳ್ಳಾರಿ ಜಿಲ್ಲೆಗೆ ಸೇರ್ಪಡೆ

ದಾವಣಗೆರೆ: ಹರಪನಹಳ್ಳಿ ತಾಲೂಕು ಅಧಿಕೃತವಾಗಿ ಬಳ್ಳಾರಿ ಜಿಲ್ಲೆಗೆ ಸೇರ್ಪಡೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು  ಹರಪನಹಳ್ಳಿ ತಾಲೂಕನ್ನ ಬಳ್ಳಾರಿ ಜಿಲ್ಲೆಗೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದ್ದಾರೆ. ಹರಪನಹಳ್ಳಿ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂಧಿಸಿದೆ. ಹರಪನಹಳ್ಳಿ ತಾಲೂಕು 1997 ರಿಂದ ದಾವಣಗೆರೆ ಜಿಲ್ಲೆಯ ಭಾಗವಾಗಿತ್ತು. ಹರಪನಹಳ್ಳಿ ತಾಲೂಕಿನ ಜನತೆ  ಹೈದ್ರಾಬಾದ್ ಕರ್ನಾಟಕ ವಿಶೇಷ ಸ್ಥಾನಮಾನದಿಂದ ವಂಚಿತರಾಗಿದ್ದರು. ಹಾಗಾಗಿ ಹರಪನಹಳ್ಳಿ ಜನತೆ ಬಳ್ಳಾರಿ ಜಿಲ್ಲೆಗೆ ಸೇರ್ಪಡೆಗೆ ಆಗ್ರಹಿಸಿ ಹೋರಾಟ ನಡೆಸಿದ್ದರು. ಈಗ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರ ಬಿದ್ದಿದೆ. ಇನ್ನು ಹತ್ತು ದಿನಗಳಲ್ಲಿ ಗೆಜೆಟ್ ನೋಟಿಪಿಕೇಷನ್ ಬರಲಿದೆ. ಆಗ ಹರಪನಹಳ್ಳಿ ಬಳ್ಳಾರಿ ಜಿಲ್ಲೆಯ ಭಾಗ ಆಗಲಿದೆ.

 

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: conatct@firstnews.tv