ಅಪಘಾತ: ದಂಪತಿಯನ್ನ ಆಸ್ಪತ್ರೆಗೆ ರವಾನಿಸಿದ ಶಾಸಕ

ದಾವಣಗೆರೆ: ಅಪಘಾತಕ್ಕೀಡಾಗಿದ್ದ ದಂಪತಿಯನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ರವಾನೆ ಮಾಡುವುದರ ಮೂಲಕ ಹರಿಹರ ಕ್ಷೇತ್ರದ ಶಾಸಕ ಎಸ್.ರಾಮಪ್ಪ  ಮಾನವೀಯತೆ ಮೆರೆದಿದ್ದಾರೆ.

ಜಿಲ್ಲೆಯ ಹರಿಹರ-ಶಿವಮೊಗ್ಗ ರಸ್ತೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತವಾಗಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ದಂಪತಿಯನ್ನು ಶಾಸಕರು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ.  ಬೈಕ್​ ಸವಾರ ಲಿಂಗರಾಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಲಿಂಗರಾಜು ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv