ಹಾಸನದಲ್ಲಿ ಭಾರಿ ಮಳೆ, ಆಂಬುಲೆನ್ಸ್ ಮೇಲೆ‌ ಬಿದ್ದ ಮರ

ಹಾಸನ: ರಾಜ್ಯದಲ್ಲಿ ಮಳೆಯ ಆರ್ಭಟ ಶುರುವಾಗಿದೆ. ಹಾಸನ ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಬೃಹತ್​ ಮರಗಳು ಧರೆಗುರುಳಿವೆ. ಅಲ್ಲದೇ ಜಿಲ್ಲೆಯ ಅರಸೀಕೆರೆ ತಾಲೂಕು ಜಾಜೂರು ಬಳಿ ಭಾರಿ ಗಾತ್ರದ ಬೇವಿನ ಮರವೊಂದು ಆಂಬುಲೆನ್ಸ್ ಮೇಲೆ‌ ಬಿದ್ದಿದೆ. ಆಂಬುಲೆನ್ಸ್​ನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಇನ್ನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv