ಕೊಡಗು: ಮುಂದುವರಿದ ಮಳೆ, ಮುಂದುವರಿದ ರಜೆ..!  

ಕೊಡಗು: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ನಾಳೆ ಅಂಗನವಾಡಿ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ. ಮಡಿಕೇರಿ ತಾಲೂಕಿನ ಭಾಗಮಂಡಲ ಹಾಗೂ ತಲಕಾವೇರಿ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದಾಗಿ ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತಗೊಂಡಿದೆ.

ನಾಪೋಕ್ಲು ರಸ್ತೆಯಲ್ಲಿ 4 ಅಡಿ ನೀರು ಮತ್ತು ಮಡಿಕೇರಿ ಸಂಪರ್ಕ ರಸ್ತೆಯಲ್ಲಿ 2 ಅಡಿ ನೀರು ಹರಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಭಾಗಮಂಡಲ ಹಾಗೂ ತಲಕಾವೇರಿಗೆ ಭಕ್ತರು ಮತ್ತು ಪ್ರವಾಸಿಗರು ಹೋಗದಂತೆ ಜಿಲ್ಲಾಡಳಿತದಿಂದ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಇನ್ನು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಸುರಕ್ಷತಾ ಕ್ರಮಕ್ಕೆ ಸಿದ್ಧವಿರುವಂತೆ ಸ್ಥಳೀಯಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv