ಅಭಿವೃದ್ಧಿ ವಿಚಾರ ಇಟ್ಕೊಂಡು ಚುನಾವಣೆ ಎದುರಿಸುತ್ತೇನೆ: ಹೆಚ್.ಬಿ.ಮಂಜಪ್ಪ

ದಾವಣಗೆರೆ: ಮೈತ್ರಿ ಸರ್ಕಾರದ ಅಭಿವೃದ್ಧಿಯನ್ನ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇನೆ ಅಂತಾ ದಾವಣಗೆರೆ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್.ಬಿ.ಮಂಜಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಅವರು ಹಣ ಬಲದ ಮೇಲೆ‌ ಚುನಾವಣೆ ಎದುರಿಸಲು ಮುಂದಾಗಿದ್ದಾರೆ. ಆದ್ರೆ ನಾವು ಅಭಿವೃದ್ಧಿ ವಿಚಾರ ಮುಂದಿಟ್ಟುಕೊಂಡು ಜನರ ಬಳಿ ಹೋಗುತ್ತೇವೆ. ನನಗೆ ಜೆಡಿಎಸ್ ಸೇರಿದಂತೆ ಎಲ್ಲಾ ಸಂಘಟನೆಗಳು ಬೆಂಬಲ ನೀಡುತ್ತಾರೆ. ನಾನು ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಈ ಬಾರಿ ನಾನು ಗೆದ್ದು ಬರುವ ವಿಶ್ವಾಸವಿದೆ ಅಂತಾ ಹೇಳಿದರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv