‘ಪ್ರಜ್ವಲ್, ನಿಖಿಲ್ ಸ್ಪರ್ಧಿಸ್ತಾರೆ ಅನ್ನೋದೆಲ್ಲಾ ರೂಮರ್ಸ್’​

ಬೆಂಗಳೂರು: ಉಪಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡ್ತಾರೆ ಅನ್ನೋದೆಲ್ಲ ಕೇವಲ ರೂಮರ್ಸ್​ ಅಂತಾ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಹೇಳಿದ್ದಾರೆ. ಲೋಕಸಭೆಯ ಉಪಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅಥವಾ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡ್ತಾರೆ ಅನ್ನೋದೆಲ್ಲಾ ಕೇವಲ ರೂಮರ್ಸ್​. ಅದರ ಬಗ್ಗೆ ಈಗ ಯಾವುದೇ ಚರ್ಚೆ ಬೇಡ ಎಂದು ಅವರು ಹೇಳಿದರು. ಇನ್ನು ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ವಿಚಾರದಲ್ಲಿ‌ ಯಾವುದೇ ಗೊಂದಲ ಇಲ್ಲ ಅಂತಾ ಸ್ಪಷ್ಟಪಡಿಸಿದರು. ಈಗಾಗಲೇ ರಾಮನಗರಕ್ಕೆ ಸೊಸೆ ಅನಿತಾ ಕುಮಾರಸ್ವಾಮಿ ಹೆಸರನ್ನು ಫೈನ್​ ಮಾಡಿರುವ ದೇವೇಗೌಡರು, ಮಿಕ್ಕ ಕ್ಷೇತ್ರಗಳಿಗೂ ಸದ್ಯದಲ್ಲೇ ಅಭ್ಯರ್ಥಿ ಘೋಷಿಸೋದಾಗಿ ಸ್ಪಷ್ಟಪಡಿಸಿದ್ದಾರೆ.