ಇಂದು ಹೆಚ್.ಡಿ.ದೇವೇಗೌಡರ ಕಂಚಿನ ಪುತ್ಥಳಿ ಲೋಕಾರ್ಪಣೆ

ರಾಮನಗರ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕಂಚಿನ ಪುತ್ಥಳಿ ಲೋಕಾರ್ಪಣೆಗೆ ಸಿದ್ಧವಾಗಿದೆ. ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ವಕ್ಷೇತ್ರ ಚನ್ನಪಟ್ಟಣ ತಾಲೂಕಿನಲ್ಲಿ ದೇವೇಗೌಡರ ಕಂಚಿನ ಪುತ್ಥಳಿ ಅನಾವರಣಗೊಳ್ಳಲಿದೆ. ಚನ್ನಪಟ್ಟಣದ ಸಾಮಂದಿಪುರ ಗ್ರಾಮದಲ್ಲಿ 7 ಅಡಿ ಉದ್ದದ  ಈ ಕಂಚಿನ ಪ್ರತಿಮೆ ನಿರ್ಮಾಣವಾಗಿದೆ. ಈ ಮೂಲಕ ದೊಡ್ಡಗೌಡರಿಗೆ ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು ದೊಡ್ಡ ಗಿಫ್ಟ್ ನೀಡಿದ್ದಾರೆ. ಪಂಚಲೋಹಗಳಾದ ಚಿನ್ನ, ಬೆಳ್ಳಿ, ಕಬ್ಬಿಣ, ತಾಮ್ರ ಹಾಗೂ ಹಿತ್ತಾಳೆ ಬಳಸಿ ಪ್ರತಿಮೆ ತಯಾರಿಸಲಾಗಿದೆ. 3 ಅಡಿ ಪೀಠದ ಮೇಲೆ 7 ಅಡಿ ಎತ್ತರದಲ್ಲಿ ಗೌಡರ ಪ್ರತಿಮೆ ನಿರ್ಮಾಣಗೊಂಡಿದೆ.

ಇಂದು ಬೆಳಗ್ಗೆ 11.45 ಕ್ಕೆ ಸಾಮಂದಿಪುರ ಗ್ರಾಮಕ್ಕೆ ದೇವೇಗೌಡರು ಆಗಮಿಸಲಿದ್ದಾರೆ. ಬಳಿಕ ದೇವೇಗೌಡರು ಪುತ್ಥಳಿ, ಕಿರುಗ್ರಂಥಾಲಯ ಹಾಗೂ ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪತ್ನಿ ಅನಿತಾಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ಮುಖಂಡರು, ಮಠಾಧೀಶರು, ಕಾಂಗ್ರೆಸ್-ಜೆಡಿಎಸ್ ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಕಾರ್ಯಕ್ರಮಕ್ಕಾಗಿ ಗ್ರಾಮದ ಜಮೀನಿನಲ್ಲಿ ಬೃಹತ್ ವೇದಿಕೆ ಸಿದ್ಧಗೊಂಡಿದೆ. ಉದ್ಘಾಟನೆಗೂ ಮುನ್ನ ಹೊಂಗನೂರು ಕೆರೆಗೆ ಗಣ್ಯರು ಬಾಗೀನ ಅರ್ಪಿಸಲಿದ್ದಾರೆ. ಕಾರ್ಯಕ್ರಮದಲ್ಲಿ  10 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ ಇದೆ. ಕಾರ್ಯಕ್ರಮಕ್ಕೆ ಬರುವ ಜನರಿಗೆಲ್ಲರಿಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಭದ್ರತೆಗಾಗಿ 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. 20 ಪಿಎಸ್​​​ಐ, 15 ಜನ ಡಿವೈಎಸ್​ಪಿ ಹಾಗೂ ಎಸ್​ಪಿ ಸ್ಥಳದಲ್ಲಿರಲಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv