ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸಬೇಕೆಂಬ ಒತ್ತಡ ಇರೋದು ನಿಜ: ಸಿಎಂ

ಮಂಡ್ಯ: ‘ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಒತ್ತಾಯ ಇರೋದು ನಿಜ’ ಅಂತಾ ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಅಂತಾ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಆದರೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ನಿಖಿಲ್ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕೋ..? ಬೇಡವೋ ಅನ್ನೋದನ್ನ ಪಕ್ಷದ ವರಿಷ್ಠರಾದ ಹೆಚ್​​ಡಿ.ದೇವೇಗೌಡರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಅಂತಾ ಸ್ಪಷ್ಟಪಡಿಸಿದರು. ಇನ್ನು, ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದು ಪಕ್ಕಾ ಆಗಿದೆ. ಪ್ರಜ್ವಲ್​ ರೇವಣ್ಣ ಅವರ ಸ್ಪರ್ಧೆ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡರು ಖಚಿತ ಪಡಿಸುತ್ತಿದ್ದಂತೆ ನಿಖಿಲ್ ಕುಮಾರ್​ ಸ್ವಾಮಿ ಕೂಡ ಚುನಾವಣಾ ಅಖಾಡಕ್ಕೆ ಇಳಿಯಬೇಕು ಅನ್ನೋ ಒತ್ತಡ ಹೆಚ್ಚಾಗಿದೆ.