ಬಿಜೆಪಿಯವರು ಬುರುಡೆ ಭಾಷಣ ಮಾಡಿಕೊಂಡು ಓಡಾಡುತ್ತಾರೆ: ಎಚ್‌ಡಿಕೆ

ಹುಬ್ಬಳ್ಳಿ: ರೈತರ ಸಾಲಮನ್ನಾ ಮಾಡುತ್ತಿರುವುದು ನಾವು. ರೈತರಿಗೆ ನೋಟಿಸ್ ಕೊಡುತ್ತಿರುವುದು ಕೇಂದ್ರ ಸರ್ಕಾರ. ಬಡವರು, ದಲಿತರು, ರೈತರು, ಕಾರ್ಮಿಕರು, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಪ್ರಾರಂಭಿಸಿದ್ದೇವೆ. ಆದ್ರೆ, ಯುವಕರಿಗೆ ಉದ್ಯೋಗ ಕೊಡುವುದಾಗಿ ಹೇಳಿ ನರೇಂದ್ರ ಮೋದಿ ಸರ್ಕಾರ ಮೋಸ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಅವರು, ನಮ್ಮ‌ಸರ್ಕಾರ ಯುವಕರಿಗೆ ಉದ್ಯೋಗ ಸೃಷ್ಟಿಸಲು ಹಲವು ಕಾರ್ಯಕ್ರಮ ರೂಪಿಸಿದೆ. ಪ್ರಲ್ಹಾದ್‌‌ ಜೋಶಿ ಹೇಳುವ ಮಾತು ಕೇಳಬೇಡಿ. ಮಹದಾಯಿ ಯೋಜನೆಗಾಗಿ ಹೋರಾಟ ಮಾಡಿದವರಿಗೆ ನಾನು ಹೇಳ ಬಯಸುವುದು ಇಷ್ಟೇ. ನರೇಂದ್ರ ಮೋದಿಯವರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮಾಡಿಲ್ಲ‌. ಬಿಜೆಪಿಯವರು ಬುರುಡೆ ಭಾಷಣ ಮಾಡಿಕೊಂಡು ಓಡಾಡುತ್ತಾರೆ. ವಿನಯ್ ಕುಲಕರ್ಣಿಯವರಿಗೆ ಧಾರವಾಡ ಜನರು ಆಶೀರ್ವಾದ ಮಾಡಿ. ಕೆಟ್ಟ ಸರ್ಕಾರ ತೆಗೆಯಲು ಮುಸ್ಲಿಂ ಬಾಂಧವರು ಮುಂದೆ ಬಂದು ಮತಹಾಕಿ ಎಂದು ಹುಬ್ಬಳ್ಳಿಯ ಖಾಸಗಿ ಹೋಟೆಲ್​​ನಲ್ಲಿ ನಡೆದ ಮೈತ್ರಿ ಪಕ್ಷದ ಅಭ್ಯರ್ಥಿ ವಿನಯ ಕುಲರ್ಣಿ ಪ್ರಚಾರರ್ಥವಾಗಿ‌ ನಡೆದ ಸಾರ್ವಜನಿಕ ಸಭೆಯಲ್ಲಿ ಎಚ್‌ಡಿಕೆ ಕರೆ ನೀಡಿದ್ದಾರೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv