ಯಲ್ಲಮ್ಮನ ಗುಡ್ಡ ರೇಣುಕಾ ದೇವಾಲಯದಲ್ಲಿ ಪ್ರವಾಹದಂತೆ ಹರಿದು ಬರುತ್ತಿದೆ ನೀರು

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಇಂದು ಬೆಳಗ್ಗೆಯಿಂದ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ. ಪರಿಣಾಮ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡ ದೇವಾಸ್ಥಾನದ ಒಳಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಎಣ್ಣೆ ಹೊಂಡದ ಪಕ್ಕದ ಹಳ್ಳ ತುಂಬಿ ಹರಿಯುತ್ತಿದೆ. ಅದರ ನೀರು ದೇವಸ್ಥಾನದ ಒಳಗೂ ಹರಿದು ಬರುತ್ತಿದೆ.

ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಯಲ್ಲಮ್ಮನ ಗುಡ್ಡದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಅಧಿಕ ಮಾಸದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಹಳ್ಳದ ನೀರು ದಾಟಿಕೊಂಡು ಬಂದು, ಕೊಡೆ ಹಿಡಿದುಕೊಂಡೇ ದೇವರ ದರ್ಶನ ಪಡೆಯುತ್ತಿದ್ದಾರೆ. ಇನ್ನು ದೇವಸ್ಥಾನದ ಸಿಬ್ಬಂದಿ ಮಳೆಯ ನಡುವೆಯೂ ಭಕ್ತರಿಗಾಗಿ, ದೇವಿಯ ದರ್ಶನಕ್ಕೆ ಅನುವು ಮಾಡಿಕೊಡುತ್ತಿದ್ದಾರೆ.

ಜಿಲ್ಲೆಯ ಖಾನಾಪುರ ತಾಲೂಕಿನಲ್ಲೂ ಮಳೆ ಅಬ್ಬರಿಸುತ್ತಿದ್ದು, ಅಶೋಕನಗರದ ಇಪ್ಪತ್ತಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ.  ಬೆಳಗಾವಿ ನಗರದಲ್ಲೂ ಮಳೆಯಾಗುತ್ತಿದ್ದು, ಚೆನ್ನಮ್ಮ ನಗರ, ವಡಗಾಂವನ ರಸ್ತೆ ಪಕ್ಕದ ಮನೆಗಳಿಗೆ ನೀರು ನುಗ್ಗಿದ ಕಾರಣ, ಮನೆಯಲ್ಲಿದ್ದ ಸಾಮಾಗ್ರಿಗಳೆಲ್ಲ ನೀರು ಪಾಲಾಗಿವೆ.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv