ವರುಣನ ಅಬ್ಬರಕ್ಕೆ ಹತ್ತಕ್ಕೂ ಹೆಚ್ಚು ಮನೆಗಳ ಗೋಡೆ ಕುಸಿತ..!

ಬೆಳಗಾವಿ: ರಾಜ್ಯಾದಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಕುಂದಾನಗರಿ ಬೆಳಗಾವಿಯಲ್ಲೂ ವರುಣ ಅಬ್ಬರಿಸ್ತಿದ್ದಾನೆ. ಜಿಲ್ಲೆಯ ಬೈಲಹೊಂಗಲ ತಾಲೂಕಿನಾದ್ಯಂತ ಅಬ್ಬರಿಸಿದ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಇನ್ನು ಎಂಕೆ ಹುಬ್ಬಳ್ಳಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಅಲ್ಲದೆ ಹತ್ತಕ್ಕೂ ಹೆಚ್ಚು ಮನೆಗಳ ಗೊಡೆ ಕುಸಿದು ಜನ ಪರದಾಡುವಂತಾಗಿದೆ. ಸದ್ಯ ತಾಲೂಕಿನಾದ್ಯಂತ ಮೋಡಕವಿದ ವಾತಾವರಣವಿದ್ದು ಇನ್ನೂ ಮಳೆ ಮುಂದುವರೆಯುವ ಸಾಧ್ಯತೆಯಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv