ದೇವನಗರಿಯಲ್ಲಿ ವರುಣನ ಆರ್ಭಟ..!

ದಾವಣಗೆರೆ: ದೇವನಗರಿಯಲ್ಲಿ ಮಳೆ ನಿಲ್ಲುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಭಾನುವಾರದ ರಜೆಯ ಮೋಜು ಮಸ್ತಿಗೆ ವರುಣ ಕಡಿವಾಣ ಹಾಕಿದ್ದಾನೆ. ಇಂದು ಬೆಳಗ್ಗೆಯಿಂದಲೂ ಸುರಿಯುತ್ತಿರುವ ಧಾರಾಕಾರ ಮಳೆ ನಗರ ಜನತೆಯಲ್ಲಿ ಆತಂಕ ಮೂಡಿಸಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ರೈತ ಸಮುದಾಯ ಸಂಕಷ್ಟಕ್ಕೀಡಾಗಿದ್ದು, ನಿರಂತರ ವರ್ಷಧಾರೆಗೆ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಬಿತ್ತನೆ ಕಾರ್ಯಕ್ಕೆ ಅಣಿಯಾಗಿದ್ದ ರೈತರಿಗೆ ವರುಣ ಅಡ್ಡಿಯಾಗಿದ್ದಾನೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv