4 ದಿನಗಳಿಂದ ಸತತ ಮಳೆ: ಭೋರ್ಗರೆಯುತ್ತಿರುವ ಜಲಪಾತಗಳು..!

ಉತ್ತರ ಕನ್ನಡ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ನಾಲ್ಕು ದಿನದಿಂದ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಬನವಾಸಿ ಜೀವನದಿ ವರದಾ ಮೈದುಂಬಿ ಹರಿಯುತ್ತಿದೆ. ಕಳೆದ ನಾಲ್ಕು ದಿನಗಳಿಂದ ವರುಣನ ಅಬ್ಬರಕ್ಕೆ ಹಳ್ಳ-ಕೊಳ್ಳ, ನದಿಗಳು ತುಂಬಿ ಹರಿಯುತ್ತಿವೆ.
ಹಾಗೇ ಸಿದ್ದಾಪುರ, ಶಿರಸಿ ಭಾಗದಲ್ಲಿ ಎಡೆಬಿಡದೆ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಉಂಚಳ್ಳಿ, ಶಿವಗಂಗೆ, ಮಾಗೋಡು ಜಲಪಾತಗಳು ಭೋರ್ಗರೆಯುತ್ತ ಹರಿಯುತ್ತಿವೆ. ಮಳೆಯ ಅಬ್ಬರಕ್ಕೆ ಜಿಲ್ಲೆಯ ಜನ ಸಂತಸಗೊಂಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv