ನಿಲ್ಲದ ಮಳೆ; ಕೊಡಗು ಶಾಲಾ-ಕಾಲೇಜುಗಳಿಗೆ ರಜೆ

ಕೊಡಗು:  ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಪಿ ಐ ಶ್ರೀ ವಿದ್ಯಾ ಆದೇಶ ಹೊರಡಿಸಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯಾದ್ಯಂತ ಎಡಬಿಡದೆ ಸರಿಯುತ್ತಿರುವ ಮಳೆಯಿಂದ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಅಂತ ಡಿಸಿ ಮನವಿ ಮಾಡಿದ್ದಾರೆ. ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ 24×7 ಸಹಾಯವಾಣಿ ಟೋಲ್ ಫ್ರೀ ಸಂಖ್ಯೆ 221077 ನ್ನು ಸಂಪರ್ಕಿಸಲು ಕೋರಿದ್ದಾರೆ.