ಜಿಲ್ಲೆಯಾದ್ಯಂತ ಭಾರಿ ಮಳೆ, ಜನ ಜೀವನ ಅಸ್ತವ್ಯಸ್ಥ

ಯಾದಗಿರಿ: ಜಿಲ್ಲೆಯ ಶಹಾಪುರದಲ್ಲಿ ಸಂಜೆ ಧಾರಕಾರ ಮಳೆ ಸುರಿದಿದೆ. ಪರಿಣಾಮ ನಗರದ ಬಸವೇಶ್ವರ ವೃತ್ತ, ಮಾರ್ಕೆಟ್ ಹಾಗೂ ಹಳೇ ಬಸ್ ನಿಲ್ದಾಣದಲ್ಲಿ ಭಾರಿ ಪ್ರಮಾಣದ ಮಳೆ ಸುರಿದ ಹಿನ್ನೆಲೆಯಲ್ಲಿ ನೀರು ರಸ್ತೆ ತುಂಬಾ ನಿಂತಿದೆ. ಚರಂಡಿಗಳಲ್ಲಿ ಮಣ್ಣು ತುಂಬಿಕೊಂಡ ಪರಿಣಾಮ ಮಳೆ ನೀರು ಹರಿದು ಹೋಗದೆ ರಸ್ತೆಯಲ್ಲಿಯೇ ನಿಂತಿತ್ತು. ಮಳೆ ನೀರಿನಿಂದ ಜಲಾವೃತವಾದ ರಸ್ತೆಯಲ್ಲಿ ಜನರು ನಡೆದಾಡಲೂ ಹರಸಾಹಸ ಪಡುವಂತಾಯಿತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ಥತಗೊಂಡಿದೆ. ನಗರದ ವಿವಿಧೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನ ನೀರು ಹೊರಹಾಕಲು ಪರದಾಡಿದ್ರು. ಇನ್ನೂ ಎರಡ್ಮೂರು ದಿನಗಳ ಕಾಲ ಮಳೆ ಬರುವ ಸಾಧ್ಯತೆಯಿದ್ದು, ಜಿಲ್ಲೆಯ ಜನರು ಎಚ್ಚರದಿಂದ ಇರಬೇಕೆಂದು ಜಿಲ್ಲಾಧಿಕಾರಿ ಮಂಜುನಾಥ ಜೆ, ಸಾರ್ವಜನಿಕರಲ್ಲಿ ಸಲಹೆ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv