ನದಿಗಳ ಒಳಹರಿವಿನ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಸೂಚನೆ

ಬೆಳಗಾವಿ: ರಾಜ್ಯದಲ್ಲಿ ಸುರಿಯುತ್ತಿರುವ ನೈರುತ್ಯ ಮುಂಗಾರು ಮಳೆಗೆ ಜಿಲ್ಲೆಯಲ್ಲಿನ ನದಿಗಳ ನೀರಿನ ಮಟ್ಟ ಹೆಚ್ಚಳಗೊಂಡಿದೆ. ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳ ಆಗಿರುವುದರಿಂದಾಗಿ ನದಿಗಳ ಒಳಹರಿವಿನ ಮೇಲೆ ನಿಗಾ ಇಡುವಂತೆ ಅಧಿಕಾರಿಗಳಿಗೆ ಬೆಳಗಾವಿ ಉಸ್ತುವಾರಿ ಕಾರ್ಯದರ್ಶಿ ರಾಕೇಶ್​ಕುಮಾರ್​ ಸಿಂಗ್​ ಸೂಚಿಸಿದ್ದಾರೆ.

ಬೆಳಗಾವಿ ಹಾಗೂ ಖಾನಾಪುರ ತಾಲೂಕುಗಳಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆಯಾಗುತ್ತಿದೆ. ನದಿಗಳಲ್ಲಿ ಭಾರೀ ನೀರು ಸಂಗ್ರಹ ಆಗುತ್ತಿದ್ದು, ವಿಪತ್ತು ನಿರ್ವಹಿಸಲು ಸದಾ ಸನ್ನದ್ಧರರಾಗಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಸರ್ಕಾರ ಆದೇಶಿಸಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv