ಬಂದರು ನಗರಿಯಲ್ಲೂ ಮುಂದುವರಿದ ಮಹಾ ಮಳೆ.!

ಮಂಗಳೂರು: ಬಂದರು ನಗರಿಯಲ್ಲಿ ಇತ್ತೀಚೆಗೆ ಸುರಿದ ಮಹಾ ಮಳೆಗೆ ಇಡೀ ಜಿಲ್ಲೆಯೆ ತತ್ತರಿಸಿತ್ತು. ಇದರಿಂದ ಸುಧಾರಿಕೊಳ್ಳುವಷ್ಟರಲ್ಲೇ ಮತ್ತೆ ಮಳೆ ಆರ್ಭಟಿಸಲು ಆರಂಭವಾಗಿದೆ. ನಿನ್ನೆ ರಾತ್ರಿಯಿಂದ ದಕ್ಷಿಣ ಕನ್ನಡದಲ್ಲೂ ಭಾರೀ ಮಳೆ ಸುರಿಯುತ್ತಿದೆ.

ನಿನ್ನೆ ರಾತ್ರಿಯಿಂದ ಧಾರಾಕಾರವಾಗಿ ಮಳೆಯಾಗುತ್ತಿದೆ. ಮಳೆಯಿಂದ ನದಿಗಳು ತುಂಬಿ ಹರಿಯುತ್ತಿವೆ. ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕಿನ ಶಾಲಾ ಕಾಲೇಜುಗಳಿಗೆ ಪುತ್ತೂರು ಸಹಾಯಕ ಆಯುಕ್ತರಾದ ಕೃಷ್ಣಮೂರ್ತಿ ರಜೆ ಘೋಷಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ:contact@firstnews.tv