ಕೊಡಗಿನಲ್ಲಿ ವರುಣನ ಅಬ್ಬರ: ತ್ರಿವೇಣಿ ಸಂಗಮದಲ್ಲಿ ನೀರಿನಮಟ್ಟ ಹೆಚ್ಚಳ

ಕೊಡಗು: ಜಿಲ್ಲೆಯಾದ್ಯಂತ ನಿನ್ನೆ ರಾತ್ರಿ ಗಾಳಿ ಸಹಿತ ಭಾರೀ ಮಳೆಯಾಗಿದೆ. ಹಲವೆಡೆ ವಿದ್ಯುತ್ ಕಂಬಗಳ ಮೇಲೆ ಮರಬಿದ್ದು ವಿದ್ಯುತ್​ ಸಂಪರ್ಕ ಕಡಿತಗೊಂಡಿದೆ. ಇನ್ನು ನಿರಂತರ ಮಳೆ ಹಿನ್ನೆಲೆ ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನಮಟ್ಟ ಹೆಚ್ಚಳವಾಗಿದ್ದು ಪ್ರವಾಹದ ಭೀತಿ ಎದುರಾಗಿದೆ.  ಇಂದು ಬೆಳಗ್ಗಿನಿಂದ ಮಳೆ ಪ್ರಮಾಣದಲ್ಲಿ ಕೊಂಚ ಇಳಿಮುಖವಾಗಿದ್ದು, ಮಳೆ ವಿಕೋಪ ಎದುರಿಸಲು ಸಕಲ ಸಿದ್ಧತೆಗಳೊಂದಿಗೆ ಜಿಲ್ಲಾಡಳಿತ ಸಜ್ಜಾಗಿದೆ. ಈಗಾಗಲೇ ಮೂರು ತಾಲೂಕುಗಳಲ್ಲೂ ವಿಶೇಷ ತಂಡ ರಚನೆ ಮಾಡಲಾಗಿದೆ. ಎಲ್ಲಾ ಸಂದರ್ಭದಲ್ಲೂ ಅಲರ್ಟ್ ಆಗಿರುವಂತೆ ತಂಡಕ್ಕೆ ಜಿಲ್ಲಾಧಿಕಾರಿ ಶ್ರೀವಿದ್ಯಾ ಸೂಚನೆ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv